ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ಈಗಾಗಲೇ ಎರಡು ಬಣಗಳಾಗಿದ್ದು ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಒಂದಲ್ಲ ಒಂದು ಆರೋಪ ಮಾಡುತ್ತಿದ್ದು ಮತ್ತೆ ಇದೀಗ ಬಿ ವೈ ವಿಜಯೇಂದ್ರ ಅವರ ವಿರುದ್ಧ ಕಿರಿಕರಿದ್ದಾರೆ.
ನನಗೆ ಯಾರ ಜೊತೆನೂ ಅಡ್ಜಸ್ಟ್ಮೆಂಟ್ ಇಲ್ಲ, ಹಾಗಾಗಿ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳಿಲ್ಲದೇ ಭೂಸೇನ ಕಛೇರಿ ಖಾಲಿ ಖಾಲಿ!
ನಗರದಲ್ಲಿಂದು ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಪಕ್ಷದವರ ಜೊತೆ ಯಾವುದೇ ಅಡ್ಜಸ್ಟ್ಮೆಂಟ್ ಇಲ್ಲ ಹಾಗಾಗಿ ನನ್ನನ್ನ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗೆ ಇಲ್ಲ. ಯತ್ನಾಳ್ ಏನು ಎಂದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ನಮಗೆ ಹೊಸ ವರ್ಷ ಯುಗಾದಿ. ವಿಜಯೇಂದ್ರ ಅವರಿಗೆ ಯಾವುದು ಹೊಸ ವರ್ಷ ಎಂದು ನನಗೆ ಗೊತ್ತಿಲ್ಲ ಎಂದರು.
