Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ
  • Bangalore
  • Politics
  • State

ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆಗೆ ಚಾಲನೆ

admin January 6, 2025
Spread the love

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ.ಎಸ್.ಆರ್.ಟಿ.ಸಿ ಆರೋಗ್ಯ”ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಇಂದು (ಸೋಮವಾರ ಜ.06) ರಂದು ಚಾಲನೆ ನೀಡಿದರು.

ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲಾ ಆಸ್ಪತ್ರೆಗಳು ಕೆ.ಎಸ್.ಆರ್.ಟಿ.ಸಿ ನೌಕರರು ಮತ್ತು ಕುಟುಂಬದವರು ಚಿಕಿತ್ಸೆಗೆ ಬಂದ ಸಂದರ್ಭದಲ್ಲಿ ಅವರನ್ನು ಗೌರವಿತವಾಗಿ ಹಾಗೂ  ಮಾನವೀಯತೆಯಿಂದ ಚಿಕಿತ್ಸೆಯನ್ನು ನೀಡಲು ಮುಂದಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇದನ್ನೂ ಓದಿ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ದಾರ್ಶನಿಕ ಸಂತ: ಸಿ.ಎಂ

“ಕೆ.ಎಸ್.ಆರ್.ಟಿ.ಸಿ ಆರೋಗ್ಯ” ಯೋಜನೆಯಡಿ ಕೆ.ಎಸ್.ಆರ್.ಟಿ.ಸಿ ಎಲ್ಲಾ ನೌಕರರು, ಅವರ ತಂದ, ತಾಯಿ ಮತ್ತು ಮಕ್ಕಳಿಗೆ ಯಾವುದೇ ಖಾಯಿಲೆ ಅಥವಾ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಲಾಗಿದೆ.

ಇದೇ ವೇಳೆ, ಕೆ.ಎಸ್.ಆರ್.ಟಿ.ಸಿ ನೌಕರರು ಅಪಘಾತದಲ್ಲಿ ಮೃತಪಟ್ಡ ಸಂದರ್ಭದಲ್ಲಿ ನೌಕಕರರ ಕುಟುಂಬಕ್ಕೆ ನೀಡಲಾಗುವ ರೂ 1 ಕೋಟಿ ಹಾಗೂ ಸೇವೆಯಲ್ಲಿರುವ ಮೃತ ಪಟ್ಡ ನೌಕಕರರ ಕುಟುಂಬಕ್ಕೆ ನೀಡಲಾಗುವ ತಲಾ ರೂ.10 ಲಕ್ಷದ ಪರಿಹಾರದ ಚಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ,  ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಶಾಸಕರಾದ ನಯನಾ ಮೋಟಮ್ಮ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ದಾರ್ಶನಿಕ ಸಂತ: ಸಿ.ಎಂ
Next: ವೈಭವದ ಶ್ರೀ ಬೀರಲಿಂಗೇಶ್ವರ ಪಲ್ಲಕ್ಕಿ ಮಹೋತ್ಸವ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.