Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
  • Bangalore
  • Politics
  • State

ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

admin January 7, 2025 1 minute read
Spread the love

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅವರೇ ಔತಣಕೂಟದಲ್ಲಿ ಸೇರಿರುವಾಗ ಇದರಲ್ಲಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವೇನಿದೆ?” ಎಂದು ತಿಳಿಸಿದರು. ಇದನ್ನೂ ಓದಿ: ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ

ಪರಮೇಶ್ವರ್ ಅವರು ಪರಿಶಿಷ್ಟ ಜಾತಿ ಹಾಗೂ ಸಮುದಾಯದ ಸಚಿವರು ಹಾಗೂ ಶಾಸಕರ ಸಭೆ ಕರೆಯಬಾರದು ಅಂತೇನಿಲ್ಲವಲ್ಲ? ಅವರೂ ಸಭೆ ಕರೆಯಬಹುದು, ನೀವು ಕರೆಯಬಹುದು, ನಾನೂ ಕರೆಯಬಹುದು. ಊಟಕ್ಕೆ ಕರೆಯುವುದರಲ್ಲಿ ಯಾವುದೇ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಪರಮೇಶ್ವರ್ ಅವರು ನಮ್ಮ ಹಿರಿಯ ನಾಯಕರು, ಗೃಹಮಂತ್ರಿಗಳು. ಅವರಿಗೆ ತಮ್ಮದೇ ಆದ ಒತ್ತಡಗಳಿವೆ. ಅವರ ಸಮುದಾಯದ ಶಾಸಕರು ಅವರ ಮುಂದೆ ಕೆಲವು ಬೇಡಿಕೆ ಇಟ್ಟಿರಬಹುದು. ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೇಡಿಕೆ ಪೂರೈಸಲು ಚರ್ಚೆ ಮಾಡಬಹುದು. ಮತ್ತೊಂದು ಕಾಂತರಾಜು ಅವರ ವರದಿ ಬಗ್ಗೆ ಚರ್ಚೆ ಆರಂಭವಾಗಿವೆ. ಈ ಬಗ್ಗೆ ಚರ್ಚೆ ನಡೆಸಲು ಸಭೆ ಸೇರುವುದು ಸಾಮಾನ್ಯ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ
Next: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.