ತಮಿಳುನಾಡು: ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೆಚ್ಚು ಚರ್ಚೆಯಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಮೊರೆ ಹೋಗಿದ್ದು ಎಲ್ಲರ ಬಾಯಿ ಮುಚ್ಚಿಸಲು ಹೈಕಮಾಂಡ್ ನಿಂದಲೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಯೆಸ್… ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಕೂಗು ಹೆಚ್ಚಾಗಿ ಕೇಳುತ್ತಿದ್ದು ಇದಕ್ಕೆ ಉದಾಹರಣೆ ಎಂಬಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ ಮೊರೆ ಹೋಗಿದ್ದಾರೆ.
ಇನ್ನು ತಮ್ಮ ರಾಜಕೀಯ ಜೀವನಕ್ಕೆ ಯಾವುದೇ ಅಡ್ಡಿ ಅಡಚಣೆಯಾಗದಂತೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿವಿಧ ದೇವಾಲಯಗಳು ತೆರಳಿ ದೇವರ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಲೋಕಮಾತಾ ಅಹಲ್ಯಾದೇವಿ ಹೋಲ್ಕರ್ ಜನ್ಮ ತ್ರಿಶತಾಮಾನೋತ್ಸವ
ಹೌದು, ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಗುರುವಾರ ಜನವರಿ 09) ರಂದು ತಮಿಳುನಾಡಿನಲ್ಲಿರುವ ಪ್ರತ್ಯಂಗೀರಾ ದೇವರು ಮತ್ತು ಕಾಂಚೀಪುರಂನ ವರದರಾಜು ಪೆರುಮಾಳ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಪತ್ನಿ ಉಷಾ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. 
ಇನ್ನು ತಮಿಳುನಾಡಿನ ಕುಂಭಕೊಂಣಂಗೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು.
