ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ರೀತಿ ಸಮಾವೇಶಗಳ ಮಾಡುವುದರ ಜೊತೆಗೆ ಜನ ಮಣ್ಣನೆಯನ್ನು ಗಳಿಸುತ್ತಿದೆ.
ಹೌದು, ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಹಲವಾರು ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರಂತೆ ಮತ್ತೆ ಇದೀಗ ಬೆಳಗಾವಿಯಲ್ಲಿ ಅತಿ ಅದ್ದೂರಿಯಾಗಿ ಸಮಾವೇಶ ಮಾಡಲು ಎಲ್ಲ ರೀತಿ ತಯಾರಿ ಮಾಡಿಕೊಳ್ಳುತ್ತಿದೆ. ಇನ್ನು ಈ ಸಮಾವೇಶದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಆರ್ ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಮಾವೇಶ ಎನ್ನುವುದು ಕೇವಲ ಹೆಸರಿಗೆ ಮಾತ್ರ ಇದು ವಸೂಲಿ ಸಮಾವೇಶವೆಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಗಂಗಮತ ಸಮಾಜ ಸದಾ ಒಗ್ಗಟ್ಟಿನಿಂದಿರಬೇಕು
ಕಾಂಗ್ರೆಸ್ ಪಕ್ಷವು 60% ವಸೂಲಿ ಮಾಡುವು ನೆನಪಿನ ಜಾತ್ರೆಯೇ ಹೊರತು ಇದು ಕಾಂಗ್ರೆಸ್ ಸಮಾವೇಶವಲ್ಲ ಎಂದಿದ್ದಾರೆ. ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು.
