ರಾಮನಗರ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆಇಂದು ಬುಧವಾರ ಜ. 22 ರಂದು ಮಧ್ಯಾಹ್ನ 12 ಗಂಟೆಗೆ ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ರವರು ರಾಮನಗರ ತಾಲೂಕು ಕಚೇರಿ ಅಭಿಲೇಖಾಲಯ ಶಾಖೆಯಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ನಿಗದಿಪಡಿಸಿರುವ ಅವಧಿಯೊಳಗೆ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ಇದನ್ನೂ ಓದಿ: ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ
ಸರ್ಕಾರ ರೈತರಿಗೆ ಹಾಗೂ ಜನಸಾಮಾನ್ಯರ ಹಿತಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸುತ್ತಿದ್ದು ನಮ್ಮ ಅಧಿಕಾರಿಗಳು ಅವುಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಯಶಸ್ವಿಯಾದಾಗ ಮಾತ್ರ ಸರ್ಕಾರದ ಇಂತಹ ಜನಪರ ಯೋಜನೆಗಳು ನಿಜವಾದ ಅರ್ಥಪಡೆಯುತ್ತವೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಉಪ ವಿಭಾಗ ಅಧಿಕಾರಿ ಬಿನೋಯ್, ತಹಶಿಲ್ದಾರ್ ತೇಜಸ್ವಿನಿ ಹಾಗು ಇತರರು ಇದ್ದರು.
