ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ತಮ್ಮ ಆರೋಗ್ಯ ಸಮಸ್ಯೆಯಿಂದ ವಿದೇಶಕ್ಕೆ ತೆರಳಿ ಶಸ್ತ್ರ ಚಿಕಿತ್ಸೆ ಪಡೆದು ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ.
ಇನ್ನು ಬೆಂಗಳೂರಿಗೆ ಆಗಮಿಸಿರುವ ನಟ ಶಿವರಾಜ್ ಕುಮಾರ್ ಅವರನ್ನು ಇಂದು (ಸೋಮವಾರ ಜನವರಿ 27) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: ಸ್ವಾಮೀಜಿಯ ವಲಯದಿಂದಲೇ ಮತ್ತೆ ಸಂವಿಧಾನದ ಕುರಿತು ಅಪಸ್ವರ: ಮಹದೇವಪ್ಪ
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಸಂದರ್ಭದಲ್ಲಿ ತಿಳಿಸಿದರು.
