Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ: ಸಿ.ಎಂ
  • Front news
  • Politics
  • State

ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ: ಸಿ.ಎಂ

admin January 31, 2025 1 minute read
Spread the love

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.

ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು. ಇದನ್ನೂ ಓದಿ: ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಕಿವುಡಾಗಿದೆ: ಸಿಎಂ

ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು.

ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು.

ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.

ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಕಿವುಡಾಗಿದೆ: ಸಿಎಂ
Next: ಇಂದು ಕೇಂದ್ರ ಬಜೆಟ್ ಮಂಡನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.