ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು (ಶನಿವಾರ ಫೆಬ್ರವರಿ 01) ರಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿರುವಂತಹ ನಿರ್ಮಲ ಸೀತಾರಾಮನ್ ಅವರು ಮಂಡಿಸುತ್ತಿದ್ದು, ಇದು ದೇಶದ ಬಡವರು, ಯುವಕರು, ಮಹಿಳೆಯರು, ಮತ್ತು ಕೃಷಿ ದಾಯಕರಿಗೆ ಸೀಮಿತವಾಗಿದೆ ಎಂದು ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಈ ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ಸಮಗ್ರ ಅಭಿವೃದ್ಧಿಯನ್ನು ಒದಗಿಸಲು ಪ್ರಯತ್ನಗಳನ್ನು ಮುಂದುವರೆಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವಾಗ ಹೇಳಿದ್ದಾರೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ ಮಂಡನೆ
ಈ ಬಜೆಟ್ನಲ್ಲಿ ಪ್ರಸ್ತಾಪಿಸಲಾದ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸುವ 10 ಕ್ಷೇತ್ರಗಳಿಗೆ ವ್ಯಾಪಿಸಿವೆ. ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸುವುದು, ಮನೆಯ ಭಾವನೆಗಳನ್ನು ಹೆಚ್ಚಿಸುವುದು, ಭಾರತದ ಏರುತ್ತಿರುವ ಮಧ್ಯಮ ವರ್ಗದ ಶಕ್ತಿಯನ್ನು ಹೆಚ್ಚಿಸುವುದು ಬಜೆಟ್ ಗುರಿಯಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
