Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗ್ಯಾರಂಟಿಗಳ ಅನುಷ್ಠಾನ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಶ್ಲಾಘನೆ
  • Bangalore
  • Politics
  • State

ಗ್ಯಾರಂಟಿಗಳ ಅನುಷ್ಠಾನ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಶ್ಲಾಘನೆ

admin February 7, 2025 1 minute read
Spread the love

ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ  ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ     ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.

ಅವರು ಇಂದು (ಫೆಬ್ರವರಿ 07,2025) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು. ಇದನ್ನೂ ಓದಿ: ನವ ಜೋಡಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ  ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

ಗ್ಯಾರಂಟಿ ಯೋಜನೆಗಳಲ್ಲಿ  ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು.

ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

 

 

 

About the Author

admin

Administrator

Visit Website View All Posts

Spread the love

Post navigation

Previous: ನವ ಜೋಡಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್
Next: ʼದೆಹಲಿʼ ಯಾರು ಏರಲಿದ್ದಾರೆ ಅಧಿಕಾರದ ಗದ್ದುಗೆ?

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.