ಗುಂಡ್ಲುಪೇಟೆ: ವಿಶ್ವ ರೈತ ಚೇತನ ಪ್ರೋಎಂ.ಡಿ. ನಂಜುಂಡ ಸ್ವಾಮಿ ಯವರ 89 ನೇ ನೆನಪಿನ ಅಂಗವಾಗಿ ಇದೇ ಫೆ. 13 ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ರೈತಪರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ನಡೆಯುವ ಜಿಲ್ಲಾ ಮಟ್ಟದ ರೈತ ಸಮಾವೇಶಕ್ಕೆ ಗುಂಡ್ಲುಪೇಟೆ ತಾಲೂಕಿನ ಮೂಲಕ 1500 ಕ್ಕೂ ಹೆಚ್ಚು ರೈತರು ಭಾವಹಿಸಲಿದ್ದಾರೆ ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಹೇಳಿದರು.
ಪಟ್ಟಣ ಪ್ರವಾಸಿ ಮಂದಿರದಲ್ಲಿ ಇಂದು ಮಂಗಳವಾರ ಫೆ. 11 ರಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆ ಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೂರಕವಾಗಿ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರೈತ ವಿರೋಧಿ ಕೆಲಸ ಮಾಡುವ ಮೂಲಕ ರೈತರನ್ನ ಬೀದಿಪಾಲು ಮಾಡುವ ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ಪಾವತಿಯಾಗದ ಬಿಲ್, ಗಂಭೀರ ಸ್ಥೀತಿಯಲ್ಲಿ ಗುತ್ತಿಗೆದಾರರು..!
ಮುಂದಿನ ದಿನಗಳಲ್ಲಿ ಮೈಕ್ರೋಫೈನಾನ್ಸ್ ಹಾವಳಿ ವಿರುದ್ದ ತಾಲ್ಲೂಕು ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
