ಬೆಂಗಳೂರು: ರಾಜ್ಯದಲ್ಲಿ ತರಕಾರಿ, ದಿನಸಿ, ಪೆಟ್ರೋಲ್ ಸೇರಿದಂತೆ ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ ಇದರ ಜೊತೆಗೆ ಇದೀಗ ನಮ್ಮ ಮೆಟ್ರೋ ಅಧಿಕಾರಿಗಳು ಮೆಟ್ರೋ ದರವನ್ನು ಸುಮಾರು 46% ರಷ್ಟು ಜಾಸ್ತಿ ಮಾಡಿರುವುದರಿಂದ ಮೆಟ್ರೋ ಪ್ರಯಾಣಿಕರು ಹೈರಾಣ ಆಗಿದ್ದಾರೆ.
ಇನ್ನು ಏಕಾಏಕಿ ದುಪ್ಪಟ್ಟು ದರ ಏರಿಕೆ ಮಾಡಿರುವುದರಿಂದ ಬೆಂಗಳೂರು ಜನ ಬಿಎಂಆರ್ಸಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಜೊತೆಗೆ ಪ್ರತಿಭಟನೆಯನ್ನು ಕೂಡ ಮಾಡುತ್ತಿದ್ದಾರೆ.
ಹೌದು, ಫೆಬ್ರವರಿ 9 ರಿಂದ ಮೆಟ್ರೋ ದರದಲ್ಲಿ ಸುಮಾರು 46% ಜಾಸ್ತಿ ಮಾಡಿರುವುದರಿಂದ ಜನಆಕ್ರೋಶಕ್ಕೆ ಬಿಎಮ್ಆರ್ಸಿಎಲ್ ಗುರಿಯಾಗಿದೆ. ಇದನ್ನೂ ಓದಿ: ಮೋದಿ ನಡೆ ಖಂಡಿಸಿ ಪ್ರತಿಭಟನೆ
ಇದೀಗ ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ.
ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ. ಎಲ್ಲಿ ಅನಿವಾರ್ಯವೋ ಅಲ್ಲಿ ದರ ಮರ್ಜ್ ಮಾಡಬೇಕಾಗುತ್ತದೆ. ಎಲ್ಲೆಲ್ಲಿ (ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆಯಾಗುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
