Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ
  • Bangalore
  • State

ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

admin February 14, 2025 1 minute read
Spread the love

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ” ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ಪಶುಪಾಲನಾ ವಿಭಾಗ ಬಿಬಿಎಂಪಿ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ (ABC) ಚಿಕಿತ್ಸೆ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು(ARV) ಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿರುತ್ತದೆ. ಇದನ್ನೂ ಓದಿ: ಎ.ಟಿ ಲೋಕೇಶ್ ರವರು ಜನ್ಮದಿನ ಸಂಭ್ರಮದಲ್ಲಿ ಸತೀಶ್ ರೆಡ್ಡಿ ಭಾಗಿ

ರೇಬೀಸ್ ಲಸಿಕೆ ಹೊರತು ಪಡಿಸಿ ಬೀದಿನಾಯಿಗಳಲ್ಲಿ ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳನ್ನು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ನಿರ್ವಹಿಸುವುದು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತ್ಯಗತ್ಯವಾಗಿರುತ್ತದೆ.

ಬೀದಿ ನಾಯಿಗಳಿಗೆ ಮಾರಕವಾಗಿರುವ ರೋಗಗಳಲ್ಲಿ ಐದು ರೋಗಗಳು ತುಂಬಾ ಮಾರಕವಾಗಿರುತ್ತದೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು 5 ರೋಗಗಳಿಗೆ ಈ ಸಂಯುಕ್ತ ಲಸಿಕೆಯು ಅತ್ಯವಶ್ಯಕವಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವಂತಹ ನಾಗರಿಕರ ಆರೋಗ್ಯ ಕಾಪಾಡುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದೇ ರೀತಿ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳ ಆರೋಗ್ಯ ಕಾಪಾಡವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೀದಿನಾಯಿಗಳಲ್ಲಿ ಕಾಣಿಸಿಕೊಳ್ಳುವಂತಹ ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕುವುದರಿಂದ ಈ ಮಾರಕ ರೋಗಗಳ ಹರಡುವಿಕೆ ಹಾಗು ತಡೆಗಟ್ಟುವಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವು ಉಪಯುಕ್ತವಾಗಲಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಎ.ಟಿ ಲೋಕೇಶ್ ರವರು ಜನ್ಮದಿನ ಸಂಭ್ರಮದಲ್ಲಿ ಸತೀಶ್ ರೆಡ್ಡಿ ಭಾಗಿ
Next: ಹಸೆಮಣೆ ಏರಲು ಸಜ್ಜಾದ ಡಾಲಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.