Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್
  • Bangalore
  • Front news
  • State

ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್

admin February 17, 2025 1 minute read
Spread the love

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು.

ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂರೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರನ್ನು ನಿಯೋಜಿಸಿದ್ದು, ಅವರ ಮೂಲಕ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯವರು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಸಿಎಂ

ನಗರದಲ್ಲಿ ಕಾವೇರಿ 5 ಹಂತವು ಈಗಾಗಲೇ ಚಾಲ್ತಿಯಲ್ಲಿರುವುದರಿಂದ, 1ನೇ ಏಪ್ರಿಲ್ 2025 ರಿಂದ ಕುಡಿಯುವ ನೀರಿನ ಸಂಪೂರ್ಣ ಜವಾಬ್ದಾರಿ ಜಲಮಂಡಳಿ ಇಲಾಖೆಯದ್ದೇ ಆಗಿರುತ್ತದೆ. ಈ ಸಂಬಂಧ ಪಾಲಿಕೆಯ ಒಡೆತನದಲ್ಲಿದ್ದ ಬೋರ್ ವೆಲ್ ಗಳನ್ನು ಹಸ್ತಾಂತರಿಸುವ ಸಂಬಂಧ ಜಲಮಂಡಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಅದರ ಜೊತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಾ 1ನೇ ಏಪ್ರಿಲ್ 2025 ವೇಳೆಗೆ ಜಲಮಂಡಳಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.

ಕುಡಿಯುವ ನೀರಿನ ವಿಚಾರವನ್ನು ಇನ್ನು ಮುಂದೆ ಸಂಪೂರ್ಣವಾಗಿ ಜಲಮಂಡಳಿಯೇ ನಿರ್ವಹಣೆ ಮಾಡಲಿದೆ. ಕುಡಿಯುವ ನೀರಿನ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗದಿಂದ ಪಾಲಿಕೆಗೆ ಬರುವ ಅನುದಾನವನ್ನು ಜಲಮಂಡಳಿಗೆ ವರ್ಗಾಯಿಸಲಾಗುವುದೆಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಸಿಎಂ
Next: ಮಾ. 3ರಿಂದ ಅಧಿವೇಶನ; ಮಾ. 7 ರಂದು ಆಯವ್ಯಯ ಮಂಡನೆ: ಸಿಎಂ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.