Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೀರಾವರಿ ಸಚಿವರುಗಳ ಸಭೆ
  • Bangalore
  • Politics
  • State

ನೀರಾವರಿ ಸಚಿವರುಗಳ ಸಭೆ

admin February 18, 2025 1 minute read
Spread the love

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ ರಾಜ್ಯಗಳ ನೀರಾವರಿ ಸಚಿವರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ನಮ್ಮ ರಾಜ್ಯಕ್ಕೆ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.

ಮೇಕೆದಾಟು, ಮಹದಾಯಿ ಯೋಜನೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಇದರ ಜತೆಗೆ ಈ ವರ್ಷ ನಾವು ಅನೇಕ ಇತರೆ ನೀರಾವರಿ ಯೋಜನೆಗಳನ್ನು ತಯಾರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮಾ. 3ರಿಂದ ಅಧಿವೇಶನ; ಮಾ. 7 ರಂದು ಆಯವ್ಯಯ ಮಂಡನೆ: ಸಿಎಂ

ತುಂಗ ಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ದುರಸ್ತಿ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗಾಗಿ ಅವುಗಳ ರಿಪೇರಿಗೆ ಯೋಜನೆಯನ್ನು ಸಿದ್ಧಪಡಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇನ್ನು ಈ ಜಲಾಶಯಕ್ಕೆ ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರವಾಗಿ ತೆಲಂಗಾಣ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಸಚಿವರ ಜೊತೆ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಪ್ರತ್ಯೇಕ ಸಭೆ ಮಾಡಲು ಈಗಾಗಲೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಮಾ. 3ರಿಂದ ಅಧಿವೇಶನ; ಮಾ. 7 ರಂದು ಆಯವ್ಯಯ ಮಂಡನೆ: ಸಿಎಂ
Next: ಬಡವರ ಭಾಗ್ಯವಿಧಾತ ಪುಸ್ತಕ ಬೆವರಿನ ಮೌಲ್ಯ ತೆರೆದಿಟ್ಟಿದೆ: ಕೆ.ವಿ.ಪಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.