ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದರಲ್ಲಿ ಮಹತ್ವದ ಯೋಜನೆಯದ ಗೃಹಲಕ್ಷ್ಮಿ ಯೋಜನೆಯು ಕಳೆದ ಮೂರು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ಬರದಿದ್ದ ಕಾರಣ ಮಹಿಳೆಯರೆಲ್ಲರೂ ದಂಗಾಗಿದ್ದಾರೆ.
ಆದರೆ ಗೃಹಲಕ್ಷ್ಮಿ ಮೂರು ತಿಂಗಳ ಹಣವನ್ನು ನಾವು ಸದ್ಯದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ಬರುತ್ತಿದೆ ಮುಂದೇನು ನುಡಿದಂತೆ ನಡೆಯುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿರುವ ಆಸ್ತಿದಾರರಿಗೆ ಶಾಕ್ ಕೊಡಲು ಸಜ್ಜದ ಬಿಬಿಎಂಪಿ
ಪ್ರತಿಯೊಬ್ಬರ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಇರುವ ಹಣವನ್ನು ಯಾವುದೇ ಕಾರಣಕ್ಕೂ ನಾವು ಇಟ್ಟುಕೊಳ್ಳುವುದಿಲ್ಲ ಅವರವರ ಖಾತೆಗೆ ಸದ್ಯದಲ್ಲೇ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮ ಸರ್ಕಾರದಿಂದ ಫಲಾನುಭವಿಗಳಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ. ಇದರ ಜೊತೆಗೆ ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣವೂ ಬಂದಿಲ್ಲವೆಂಬ ಆರೋಪವಿದೆ. ಈ ಹಣವನ್ನೂ ನಾವು ಶೀಘ್ರವೇ ಹಾಕುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆಯ ಹಣ ಬರದ ಕಾರಣ ರಾಜ್ಯದ ಕೋಟ್ಯಂತರ ಮಹಿಳೆಯರು ಆತಂಕದಲ್ಲಿದ್ದಾರೆ. ಯಾವಾಗ ತಮ್ಮ ಖಾತೆಗೆ ಹಣ ಜಮಾ ಆಗುತ್ತದೋ ಅಂತಾ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
