ಬೆಂಗಳೂರು: ಬಿಬಿಎಂಪಿ ವತಿಯಿಂದ 3 ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು.
ನಮ್ಮ ರಸ್ತೆ-2025 ಫೆ. 20, 21 ಹಾಗೂ 22 ರಂದು ಕಾರ್ಯಕ್ರಮದಲ್ಲಿ ಕಾರ್ಯಗಾರಗಳು, ವಿವಿಧ ಸಂಚಾರ ಪದ್ಧತಿಗಳ ಪ್ರದರ್ಶನ ಹಾಗೂ ಸಮಾವೇಶಗಳು ನಡೆಯಲಿವೆ. ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ರಸ್ತೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಸಂಚಾರ ದಟ್ಟಣೆ ನಿಯಂತ್ರಣದ ಕುರಿತು ಪರಿಹಾರಗಳನ್ನು ಕಂಡುಕೊಳ್ಳಲು ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ
“ನಮ್ಮ ರಸ್ತೆ 2025” ಸುಸ್ಥಿರ ನಗರ ವಿನ್ಯಾಸ ಸೃಷ್ಟಿಸುವಲ್ಲಿ ಬಹುಮುಖ್ಯ ಪಾತ್ರವಹಿಸಲಿರುವ ಸಮಗ್ರ ಬಹು ಮಾದರಿಯ ಸಾರಿಗೆ ವ್ಯವಸ್ಥೆಗಳ ಕುರಿತಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮೋಟಾರು ರಹಿತ ಸಾರಿಗೆಗಳನ್ನೊಳಗೊಂಡಂತೆ ಭವಿಷ್ಯದ ಯೋಜನಾಬದ್ಧ ನಗರವನ್ನು ರೂಪಿಸುವಲ್ಲಿ ವಿಶ್ವಾಸಾರ್ಹ ಮಾಹಿತಿ ಹೇಗೆ ಸಹಾಯಕವಾಗಲಿದೆ ಎನ್ನುವುದನ್ನು ತಿಳಿಸಲಿದೆ.
ನಗರದಲ್ಲಿ ವಿಸ್ತರಿಸುತ್ತಿರುವ ಮೆಟ್ರೋ, ಉಪ ನಗರ ರೈಲು ಮತ್ತು ಬಸ್ಸುಗಳ ಜಾಲಗಳು ಸಮಗ್ರ ಚಲನಶೀಲ ಪರಿಸರ ವ್ಯವಸ್ಥೆಯನ್ನು ರೂಪಿಸಲು ಅನನ್ಯವಾದ ಅವಕಾಶವನ್ನು ಒದಗಿಸುತ್ತಿರುವ ಹಂತದಲ್ಲಿ, ಬೆಂಗಳೂರು ನಗರವು ತನ್ನ ಸಾರಿಗೆ ವ್ಯವಸ್ಥೆಯನ್ನು ಪರಿವರ್ತಿಸುವಲ್ಲಿ ಒಂದು ನಿರ್ಣಾಯಕ ಘಟ್ಟದಲ್ಲಿದೆ. ‘ನಮ್ಮ ರಸ್ತೆ-2025’ ಪರಿಪೂರ್ಣ ಹಂತದ ಸಂಪರ್ಕವನ್ನು ಖಚಿತಪಡಿಸಿಕೊಳ್ಳುತ್ತಾ, ನಗರದ ಚಲನತೆಯನ್ನು ಪುನರ್ ರೂಪಿಸಲು, ಸಂಪರ್ಕ ಸಾಧ್ಯತೆಯನ್ನು ಹೆಚ್ಚಿಸಲು ಮತ್ತು ಪಾದಚಾರಿಗಳು ಮತ್ತು ಸೈಕಲ್ ಸವಾರರ ಸುರಕ್ಷಿತತೆಯಲ್ಲಿನ ಸವಾಲುಗಳನ್ನು ಸ್ವೀಕರಿಸಲು ಪ್ರಮುಖ ಬಾಧ್ಯಸ್ಥರನ್ನು ಒಟ್ಟಿಗೆ ತರುವ ವೇದಿಕೆ ಇದಾಗಿದೆ.
