ಕೋಲ್ಕತಾ: ಕ್ರಿಕೆಟಿಗ ಸೌರವ್ ಗಂಗೋಲಿಯವರ ಕಾರು ಅಪಘಾತಕ್ಕಿಡಾಗಿದ್ದು ಈ ಸಂದರ್ಭದಲ್ಲಿ ಯಾವುದೇ ಪ್ರಾಣ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ದುರ್ಗಾಪುರ ಎಕ್ಸ್ಪ್ರೆಸ್ ವೇನಲ್ಲಿ ಕಾರಿಗೆ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಸೌರವ್ ಗಂಗೂಲಿ ಅವರ ಇದ್ದ ಕಾರು ಡ್ಯಾಮೇಜಾಗಿದೆ. ಆದರೆ ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣ ಅಪಾಯವಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಕ್ರೀಡೆ ಸಂತಸ ಮತ್ತು ಆರೋಗ್ಯದ ಪ್ರತೀಕ
ಹೌದು, ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಅವರಿದ್ದ ಕಾರು ಅಪಘಾತ ಸಂಭವಿಸಿದೆ. ಸೌರವ್ ಗಂಗೂಲಿ ಪೂರ್ವನಿಗದಿಯಂತೆ ಬರ್ಧ್ವಾನ್ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಹೊರಟಿದ್ದರು. ಈ ಅಚಾತುರ್ಯದಿಂದಾಗಿ 10 ನಿಮಿಷಗಳ ಕಾಲ ಎಕ್ಸ್‌ಪ್ರೆಸ್ ವೇನಲ್ಲಿಯೇ ಕಾಯಬೇಕಾಗಿ ಬಂದಿತು. ಇದಾದ ನಂತರ ಧೃತಿಗಡೆದ ಸೌರವ್ ಗಂಗೂಲಿ ಪೂರ್ವನಿಗದಿಯಂತೆ ಬರ್ಧ್ವಾನ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಗಣ್ಯರ ಜತೆ ಸಮಾಲೋಚನೆ ನಡೆಸಿದರು. ಬರ್ಧ್ವಾನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಜತೆ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್‌ನ ಭವಿಷ್ಯ ಹಾಗೂ ತಮ್ಮ ವರ್ಣರಂಜಿತ ಕ್ರಿಕೆಟ್ ಬದುಕಿನ ಆಸಕ್ತಿಕರ ಘಟನೆಗಳನ್ನು ಹಂಚಿಕೊಂಡರು ಎಂದು ವರದಿಯಾಗಿದೆ.
