Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸೋತೆ ಎಂದು ಸುಮ್ಮನೆ ಕೂರಬಾರದು: ಡಿಸಿಎಂ
  • Bangalore
  • Front news
  • Politics
  • State

ಸೋತೆ ಎಂದು ಸುಮ್ಮನೆ ಕೂರಬಾರದು: ಡಿಸಿಎಂ

admin February 25, 2025 1 minute read
Spread the love

ಬೆಂಗಳೂರು: ಸೋತೆ ಎಂದು ಸುಮ್ಮನೆ ಕೂರಬಾರದು, ಸೋಲೆ ನಮ್ಮ ಬದುಕಿಗೆ ದಾರಿಯಾಗಬೇಕು. ಇಂದು ಸೋತರೆ ನಾಳೆ ಗೆದ್ದೇ ಗೆಲ್ಲುತ್ತೇವೆ ಎನ್ನುವ ಛಲ ನಮ್ಮಲ್ಲಿದ್ದರೆ ಒಂದಲ್ಲ ಒಂದು ದಿನ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮ ವಿಶ್ವಾಸ ಎಲ್ಲರನ್ನು ಇರಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಮಾರು 86 ಅಭ್ಯರ್ಥಿಗಳು ಸೋಲನ್ನು ಅನುಭವಿಸಿದ್ದಾರೆ. ಇನ್ನು ಸೋಲು ಅನುಭವಿಸಿದ ಅಭ್ಯರ್ಥಿಗಳಿಗೆ ಧೈರ್ಯ ನೀಡುವ ಕುರಿತಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆದು ಎಲ್ಲಾ ಅಭ್ಯರ್ಥಿಗಳಿಗೂ ಕಿವಿಮಾತು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆ ಬಳಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪರಾಜಿತ ಅಭ್ಯರ್ಥಿಗಳು ಸುಮ್ಮನೆ ಕೂರದೇ ಕಾರ್ಯಪ್ರವೃತ್ತರಾಗಬೇಕು ಹೇಳಿದ್ದಾರೆ. ಇದನ್ನೂ ಓದಿ: ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ

ನಾವು ಸೋತಿದ್ದ 86 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕರೆಸಿ ಅವರ ಕಷ್ಟ ಆಲಿಸಿ, ಮುಂದಿನ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಎಐಸಿಸಿ ಜತೆ ಚರ್ಚೆ ಮಾಡಿ ಪಕ್ಷಕ್ಕೆ ಹಿನ್ನಡೆ ಇರುವ ಉಳಿದ 20 ಕ್ಷೇತ್ರಗಳಲ್ಲಿ ಪಕ್ಷವನ್ನು ಯಾವ ರೀತಿ ಕಟ್ಟಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಹಾಗೂ ಸೋತವರನ್ನು ಮತ್ತೊಂದು ದಿನ ಕರೆದು ಸಭೆ ಮಾಡಲಿದ್ದೇನೆ.

ಚುನಾವಣೆಯಲ್ಲಿ ಸೋತ ನಂತರ ಇವರು ಲೋಕಸಭೆ ಚುನಾವಣೆ, ಸಹಕಾರಿ ಸಂಘಗಳ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಶಕ್ತಿ ತುಂಬಲು ಸಲಹೆ ನೀಡಲಾಗಿದೆ. ಮುಂದಿನ ಅಧಿವೇಶನ ನಡೆಯುವಾಗ ನಾನು ಹಾಗೂ ಮುಖ್ಯಮಂತ್ರಿಗಳು ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಚರ್ಚೆ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಶಿವರಾತ್ರಿ ದಿನದಂದು ಕುಂಭ ಮೇಳದಲ್ಲಿ 1 ಕೋಟಿ ಭಕ್ತರ ನಿರೀಕ್ಷೆ
Next: ನನ್ನ ಮಗಳು ಒಪ್ಪದಿದ್ದ ಕಾರಣ ನಾನು 2ನೇ ಮದುವೆಯಾಗಿಲ್ಲ: ಉಮಾಶ್ರೀ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.