ಬೆಂಗಳೂರು: ವಿಧಾನಸಭೆ ವತಿಯಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳದ ಸಿದ್ಧತಾ ಕಾರ್ಯವನ್ನು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
