ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮ ನೆರವೇರಲಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ, ಆಹ್ವಾನ ಪತ್ರಿಕೆ ನೀಡಿದರು.
ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ.ಧರಣೀದೇವಿ ಅವರು ಉಪಸ್ಥಿತರಿದ್ದರು.
