ಬೆಂಗಳೂರು: ನಾಡಿನಾದ್ಯಂತ ಇಂದು ಮಹಾಶಿವರಾತ್ರಿಯನ್ನು ಬಹಳ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇಂದು (ಬುಧವಾರ ಫೆ. 26) ರಂದು ಬೆಳಗ್ಗೆಯಿಂದಲೇ ಶಿವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಿವನನ್ನು ಆರಾಧಿಸುತ್ತಿದ್ದಾರೆ.
ಹೌದು, ಇಂದು ನಾಡಿನಾದ್ಯಂತ ಬಹಳ ವಿಜೃಂಭಣೆಯಿಂದ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು ಬೆಂಗಳೂರು ನಗರದಲ್ಲಿ ಎಲ್ಲಾ ದೇವಾಲಯಗಳಲ್ಲಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇನ್ನು ಬೆಂಗಳೂರಿನ ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ, ಹನುಮಂತನಗರದ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಹಬ್ಬದ ಆಚರಣೆ, ಸಂಭ್ರಮ ಜೋರಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನಿಗೆ ವಿಶೇಷ ಪೂಜೆ, ಪ್ರಾರ್ಥನೆ, ನೈವೇದ್ಯ, ರುದ್ರಾಭಿಷೇಕ ಮಾಡಿಸುತ್ತಿದ್ದಾರೆ.
