ಬೆಂಗಳೂರು: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಬೆಂಗಳೂರು ನಗರ ಜಿಲ್ಲೆ, ಸಂಕಲ್ಪ ಯೋಜನೆ ವೇಮನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಇಂದು (ಶುಕ್ರವಾರ ಫೆ. 28) ರಂದು ವೇಮನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಹಾಯೋಗಿ ವೇಮನ್ ರಸ್ತೆ ಮೂರನೇ ಬ್ಲಾಕ್ ಬಿಡಿಎ ಕಾಂಪ್ಲೆಕ್ಸ್ ಕೋರಮಂಗಲದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಈ ಉದ್ಯೋಗ ಮೇಳವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತ ನಾಯಕ್ ರವರು ಉದ್ಘಾಟಿಸಿದರು.
ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿ ಅವರು, ರಾಜ್ಯದಲ್ಲಿರುವ ನಿರುದ್ಯೋಗ ಯುವಕ ಯುವತಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಉದ್ಯೋಗ ಮೇಳವನ್ನು ನಾವು ಮಾಡುತ್ತಿದ್ದೇವೆ. ಎಸ್ ಎಸ್ ಎಲ್, ಸಿ ಪಿ ಯು ಸಿ ಹಾಗೂ ಯಾವುದೇ ಪದವಿ, ಡಿಪ್ಲೋಮಾ ಮಾಡಿರುವಂತಹ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಇಂದು ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಹತೆಗೆ ತಕ್ಕಂತ ಉದ್ಯೋಗವನ್ನು ಪಡೆದುಕೊಳ್ಳಬಹುದು ಎಂದರು. ಇದನ್ನೂ ಓದಿ: 14 ನೇ ವರ್ಷದ ಜಾನಪದ ಜಾಗರಣೆ; ಸಾಧಕರಿಗೆ ಸನ್ಮಾನ
ಇನ್ನು ಕೌಶಲ್ಯ ಅಭಿವೃದ್ಧಿ ನಿಗಮದಿಂದ ತರಬೇತಿಯನ್ನು ನೀಡುವುದರ ಜೊತೆಗೆ ಅವರಿಗೆ ಮುಂದೆ ತಮ್ಮ ಕಾಲು ಮೇಲೆ ತಾವು ನಿಂತುಕೊಳ್ಳಲು ನಾವು ತಯಾರು ಮಾಡುತ್ತಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಬಂದಿರುವಂತಹ ಎಲ್ಲಾ ನಿರುದ್ಯೋಗ ಯುವಕ ಯುವತಿಯರಿಗೆ ಈ ಉದ್ಯೋಗ ಮೇಳದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗಲೆಂದು ಹಾರೈಸುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿದರು.
ನಂತರ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತ ನಾಯಕ್ ಮಾತನಾಡಿ, ನಮ್ಮ ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯರೂಪಿಸಲು ನಾವು ಈ ಉದ್ಯೋಗ ಮೇಳವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಯಾವ ವಲಯದಲ್ಲಿ ಯಾವ ಕೆಲಸಗಳಿವೆ ಎಂದು ಗೊತ್ತಿರುವುದಿಲ್ಲ ಹಾಗಾಗಿ ಕರ್ನಾಟಕ ಕೌಶಲ್ಯ ಉದ್ಯಮಶೀಲತೆ ವತಿಯಿಂದ ಉದ್ಯೋಗ ಮೇಳವನ್ನು ನಾವು ಆಯೋಜಿಸಿದ್ದೇವೆ.
ಕೇವಲ ಬೆಂಗಳೂರು ನಗರದಲ್ಲಿ ಮಾತ್ರವಲ್ಲದೆ ನಾಳೆ ನಾಡಿದ್ದು ಕರ್ನಾಟಕ ರಾಜ್ಯದಲ್ಲಿ ಇನ್ನೂ ಹಲವಾರು ಜಿಲ್ಲೆಗಳಲ್ಲಿ ನಾವು ಉದ್ಯೋಗ ಮೇಳವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
