ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಹಣ ನೀಡದಿರುವ ರಾಜ್ಯ ಸರ್ಕಾರದ ವಿರುದ್ಧ ಶಾಸಕರಾದ ಸುರೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ , ಬೂಜೆಗೌಡ ಅವರು ಸೇರಿದಂತೆ ವಿವಿಧ ಜೆಡಿಎಸ್ ಶಾಸಕರ ಪ್ರತಿಭಟನೆ.
ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಹಣ ನೀಡದೆ, ಕೇವಲ ಚುನಾವಣೆ ಸಮಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗುವ ಸಂದರ್ಭದಲ್ಲಿ ಮಾತ್ರ ಹಣ ನೀಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಹಾಗೂ ಸಚಿವ ವೆಂಕಟೇಶ್ ರವರು ಕಂಟ್ರಾಕ್ಟರ್ ಬಗ್ಗೆ ಜೆಡಿಎಸ್ ಕಾರ್ಯಕರ್ತ ಎಂದು ಅವಾಚ್ಯ ಶಬ್ದ ಉಪಯುಗಿಸಿ ಮಾತನದಿರುವುದನ್ನು ಖಂಡಿಸಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕರು ಇಂದು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಲು ಬಿಬಿಎಂಪಿ ರೆಡಿ!
