ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು (ಗುರುವಾರ ಮಾರ್ಚ್ 06) ರಂದು ವಿಧಾನಸೌಧದಲ್ಲಿ ರೆಡ್ಡಿ ಸಂಘದ ಅಧ್ಯಕ್ಷರಾದ ಜನಾರ್ಧನ್ ರೆಡ್ಡಿ ಸೇರಿದಂತೆ ಇನ್ನೂ ಹಲವು ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ತಾಲೂಕು ಪಿಡಿಒ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ
ರೆಡ್ಡಿ ಸಮಾಜ ಎಲ್ಲ ರಂಗದಲ್ಲಿ ಸಮಾಜದ ಮುಖ್ಯ ವಾಹಿನಿಗೆ ಬರಲು ನಿಗಮ ಮಂಡಳಿ ರಚನೆಯ ಅಗತ್ಯವಿದೆ. ನಿಗಮ ಮಂಡಳಿ ರಚಿಸಿ, ₹1000 ಕೋಟಿ ಕಾಯ್ದಿರಿಸಲು ಮನವಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಜನಾರ್ಧನ್ ರೆಡ್ಡಿ ಹೇಳಿದರು.
