ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವಂತಹ ತೇಜಸ್ವಿ ಸೂರ್ಯ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಹೌದು, ಚಿಕ್ಕ ವಯಸ್ಸಿನಲ್ಲಿ ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟ ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ತಮ್ಮ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ.
ಶಿವಶ್ರೀ ಸ್ಕಂದಪ್ರಸಾದ್ ರವರನ್ನು ಕೈ ಹಿಡಿಯುವ ಮೂಲಕ ಸರಳ ಹಾಗೂ ಸಾಂಪ್ರದಾಯಕವಾಗಿ ಮದುವೆಯಾಗಿದ್ದಾರೆ.
ಇನ್ನು ಮಾರ್ಚ್ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭರ್ಜರಿ ಬ್ಯಾಚುಲರ್ಸ್ 2 ವೇದಿಕೆಯಲ್ಲಿ ಅಬ್ಬರಿಸುತ್ತಿರುವ ಡ್ರೋನ್ ಪ್ರತಾಪ್
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.
ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ ಎಂದು ತಿಳಿದು ಬಂದಿದೆ.
