ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡನೆಯನ್ನು ಮಂಡಿಸುತಿದ್ದು, ಇದು ಅವರ 16ನೇ ಬಜೆಟ್ ಮಂಡನೆಯಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾ. 07) ರಂದು 2025-2026 ನೇ ಸಾಲಿನ ಬೃಹತ್ ಗಾತ್ರದ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಯಾವ ಯಾವ ವಲಯಗಳಿಗೆ ಎಷ್ಟೆಷ್ಟು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಇಡೀ ಕರ್ನಾಟಕದ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ: ಡಿಸಿಎಂ ಭೇಟಿ ಮಾಡಿದ ರೆಡ್ಡಿ ಸಂಘದ ಅಧ್ಯಕ್ಷರು
ಇನ್ನು ಸಿಎಂ ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ಗೆ ಅನುಮೋದನೆ ಪಡೆದರು.
2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಬೆಂಗಳೂರಿನ ಜನರಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಬೆಂಗಳೂರಿನ ಟ್ರಾಫಿಕ್ ಪರಿಹಾರಕ್ಕೆ ಹೊಸ ಯೋಜನೆ ಘೋಷನೆ ಮಾಡುತ್ತಾರಾ ಎಂಬ ನಿರೀಕ್ಷೆ ಇದೆ. ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಹಣ ಮೀಸಲಿಡಲಿದ್ದಾರೆ ಎಂಬ ಕುತೂಹಲ ಇದೀಗ ಇಡೀ ಕರ್ನಾಟಕದ ಜನತೆಯಲ್ಲಿ ಮೂಡಿದೆ.
