ಬೆಂಗಳೂರು: 2025-26ನೇ ಸಾಲಿನ ಬಜೆಟ್ ಮಂಡನೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿದ್ದು, ಈ ಬಜೆಟ್ ಮಂಡನೆಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಹಾಗೂ ವಕ್ಫ್ ಆಸ್ತಿ ದುರಸ್ತಿಕರಣ ಮತ್ತು ನವೀಕರಣ ಹಾಗೂ ಮುಸ್ಲಿಮರ ಸ್ಮಶಾನಗಳ ರಕ್ಷಣೆಗಾಗಿ ಹಾಗೂ ಮೂಲಸೌಕರ್ಯ ಒದಗಿಸಲು 150 ಕೋಟಿ ರೂಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದನ್ನೂ ಓದಿ:
ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
