Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  •  ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಹೆಬ್ಬಾಳಕರ್
  • Bangalore
  • Politics
  • State

 ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಹೆಬ್ಬಾಳಕರ್

admin March 7, 2025 1 minute read
Spread the love

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು (ಶುಕ್ರವಾರ ಮಾ. 07) ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ.  ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು.

ಬಜೆಟ್‌ನಲ್ಲಿ ಸಮಾಧಾನಕರ

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ ಸಿದ್ದರಾಮಯ್ಯನನವರೇ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ನಾಳೆ ಗ್ರ್ಯಾಚುಯಿಟಿ ವಿತರಣೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ಹೇಳಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಯೋಚನೆಯಿದೆ.  ಈ ಮೂಲಕ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ  ಸಹಾಯವಾಗಲಿದೆ. ಈ ಬಗ್ಗೆ  ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಒಂದು ಚುನಾವಣೆ ಇಂದಿನ ಅನಿವಾರ್ಯತೆ
Next: ಅಭಿವೃದ್ಧಿಗೆ ಪೂರಕವಾದ ಬಜೆಟ್: ಯಲ್ಲಪ್ಪ ನರಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.