ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅಕಾಡೆಮಿಗೆ 2.16 ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿರುವ ಪತ್ರಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ..
ರಾಜ್ಯ ಬಜೆಟ್ ನಲ್ಲಿ ಪತ್ರಕರ್ತರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಕೊಡುಗೆಗಳು
ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ
ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆ. ನಿವೃತ್ತ ಪತ್ರಕರ್ತರ ಮಾಸಾಶನ 12ರಿಂದ 15 ಸಾವಿರ ರೂ.ಗಳಿಗೆ ಏರಿಕೆ. ಮೃತ ಪತ್ರಕರ್ತರ ಕುಟುಂಬದವರಿಗೆ ನೀಡುವ ಮಾಸಾಶನ 6ರಿಂದ 7.500 ರೂ.ಗಳಿಗೆ ಏರಿಕೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಹೆಬ್ಬಾಳಕರ್
ಕರ್ನಾಟಕ ಮಾಧ್ಯಮ ಅಕಾಡೆಮಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಕಾಡೆಮಿಗೆ 2.16 ಕೋಟಿ ರೂ.ಗಳ ಅನುದಾನ ಇದಾಗಿದೆ.
