Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ: ರಾಮಲಿಂಗಾರೆಡ್ಡಿ
  • Bangalore
  • Front news
  • Politics
  • State

ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ: ರಾಮಲಿಂಗಾರೆಡ್ಡಿ

admin March 8, 2025 1 minute read
Spread the love

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು (ಶನಿವಾರ ಮಾ. 08) ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿಯಮದ ಕೇಂದ್ರ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವರಾಗಿರುವಂತ ರಾಮಲಿಂಗಾರೆಡ್ಡಿಯವರು ಮಾನ್ಯ ಉಪಾಧ್ಯಕ್ಷರ ಘನ ಉಪಸ್ಥಿತಿ ವಹಿಸಿದ್ದರು.

ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಶ್ರೀಮತಿ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಹಾಡು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಗೌರವಧನ ನೀಡಿ ಸನ್ಮಾನಿಸಲಾಯಿತು.

ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ, ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ. ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾನ್ಯ ಉಪಾಧ್ಯಕ್ಷರು ಮಾತನಾಡಿ, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸ್ವಾಗತಾರ್ಹ ಎಂದು ಎಲ್ಲಾ ಪ್ರತಿಭಾ ಪುರಸ್ಕೃತ 42 ಮಹಿಳಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ‌ಮಹಿಳಾ ತಾಂತ್ರಿಕ ಸಿಬ್ಬಂದಿಗಳೇ‌ ಹೆಚ್ಚಿನ ಸಂಖ್ಯೆ ಕಾರ್ಯನಿರ್ವಹಿಸಿ‌ರುವ ನಗರ ಸಾರಿಗೆ ಬಸ್ಸುಗಳ ಪುನಶ್ಚೇತನದ ವಿಡಿಯೋ ವನ್ನು‌ ಬಿಡುಗಡೆ‌ ಮಾಡಲಾಯಿತು.

ಕ.ರಾ.ರ.ಸಾ.ನಿಗಮದಲ್ಲಿ ಒಟ್ಟು 34,000 ಸಿಬ್ಬಂದಿಗಳಿದ್ದು, ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 3052 ಮಹಿಳಾ ಉದ್ಯೋಗಿಗಳಿರುತ್ತಾರೆ.  ಅದರಲ್ಲಿ ಮಹಿಳಾ ಅಧಿಕಾರಿ-80 ನಿರ್ವಾಹಕರು-875, ಚಾಲಕ ಕಂ ನಿರ್ವಾಹಕರು-26, ತಾಂತ್ರಿಕ ಸಿಬ್ಬಂದಿಗಳು-976, ಭದ್ರತಾ ಸಿಬ್ಬಂದಿಗಳು-110 ಕಛೇರಿ ಸಹಾಯಕರು-80 ಹಾಗೂ ಮಹಿಳಾ ಸ್ವಚ್ಚತಾಗಾರರು-135 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
Next: ಸಿಎಂ 4 ಲಕ್ಷ ಕೋಟಿ ಬಜೆಟ್ ನ ಎಲ್ಲ ವರ್ಗದವರಿಗೂ ಸಮಾನವಾಗಿ ಹಂಚಿಕೆ ಮಾಡಿದ್ದಾರೆ: ಡಿಕೆಶಿ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.