Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ- ವಿಜಯೇಂದ್ರ
  • Bangalore
  • Politics
  • State

ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ- ವಿಜಯೇಂದ್ರ

admin March 8, 2025 1 minute read
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂಗಳು- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಇವರು ಕೈ ಹಾಕಿದ್ದಾರೆ. ಮದರಸಾಕ್ಕೆ ಹಣ ಕೊಟ್ಟಿದ್ದಾರೆ. ಮೌಲ್ವಿಗಳ ಹಣ ಹೆಚ್ಚಿಸಿದ್ದಾರೆ. ಮದುವೆಗೆ 50 ಸಾವಿರ ನೀಡಿದ್ದಾರೆ. ಹಾಗಿದ್ದರೆ ಹಿಂದೂಗಳಲ್ಲಿ ಬಡವರಿಲ್ಲವೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಗೆ ಯಾಕೆ ಈ ದುರ್ಬುದ್ಧಿ ಎಂದು ಪ್ರತಿಯೊಬ್ಬರೂ ಈ ರಾಜ್ಯದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಬಜೆಟ್ಟನ್ನು ಸಿದ್ದರಾಮಯ್ಯನವರು ಮಂಡಿಸಿಲ್ಲ; ಜಮೀರ್ ಅಹ್ಮದ್ ಖಾನ್ ಅವರೇ ಮಂಡಿಸಿದರೇ ಎಂಬ ಅನುಮಾನ ನನಗಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ; ಇದು ತೀರಾ ನಿರಾಶಾದಾಯಕ ಎಂದು ಹೇಳಿದರು. ಇದನ್ನೂ ಓದಿ: ದೇಶದ ಪ್ರಗತಿಗೆ ನಾರಿಯರ ಪಾತ್ರ ಪ್ರಮುಖ: ವಿಜಯೇಂದ್ರ

ಈ ಬಜೆಟ್ನಿಂದ ರಾಜ್ಯದ ಕೃಷಿಕರು, ಕೃಷಿ ಕ್ಷೇತ್ರ, ಯುವಕರು, ಮಹಿಳೆಯರು, ಬಡವರಿಗೆ ಯಾವುದೇ ಅನುಕೂಲ ಆಗಲಾರದು. ಇದು ಅಭಿವೃದ್ಧಿಗೆ ಪೂರಕವಲ್ಲ ಎಂದರು. ಸಿದ್ದರಾಮಯ್ಯನªರಿಗೆ ಅಲ್ಪಸಂಖ್ಯಾತರ ಬಗೆಗಿನ ಪ್ರೀತಿ, ಕಾಳಜಿ ಎಲ್ಲರಿಗೂ ಗೊತ್ತಿದೆ. ಆದರೆ, ಹಣಕಾಸಿನ ಸಚಿವರಾಗಿ ಅವರು ಈ ಮಟ್ಟಕ್ಕೆ ಇಳಿಯುವರೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹೊರದೇಶಕ್ಕೆ ಹೋಗಲು ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಯಾಕೆ ಹಿಂದೂಗಳಲ್ಲಿ ಯಾರಿಗೂ ಕೊಡಬೇಕೆಂದು ನಿಮಗೆ ಅನಿಸಲಿಲ್ಲವೇ ಸಿದ್ದರಾಮಯ್ಯನವರೇ ಎಂದು ಕೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ದೇಶದ ಪ್ರಗತಿಗೆ ನಾರಿಯರ ಪಾತ್ರ ಪ್ರಮುಖ: ವಿಜಯೇಂದ್ರ
Next: ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.