Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
  • Bangalore
  • Politics
  • State

ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

admin March 8, 2025 1 minute read
Spread the love

ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು (ಶನಿವಾರ ಮಾ. 08) ರಂದು ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರು ಕುಟುಂಬ ಸಮಾಜ ಅಥವಾ ಯಾವುದೇ ಕ್ಷೇತ್ರದಲ್ಲೂ, ಸಮರ್ಥವಾಗಿ ನಿಭಾಯಿಸದೆ ಹಿಂದೆ ಸರಿದ ಉದಾಹರಣೆಗಳಿಲ್ಲ. ಮಹಿಳೆಗೆ ತನ್ನದೇ ಆದ ಜವಾಬ್ದಾರಿ ಇದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾಳೆ ಎಂದರು.

ಹೆಣ್ಣುಮಕ್ಕಳಿಗೆ ಜವಾಬ್ದಾರಿ ಜಾಸ್ತಿ. ಪುರುಷರಿಗಿಂತ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು. ಮನೆಯ ಒಳಗೆ ಮತ್ತು ಹೊರಗೂ ತನ್ನದೇ ಆದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬರುವ‌ ಮಹಿಳೆಯರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಸಚಿವರು ಹೇಳಿದರು.  ಇದ್ನನೂ ಓದಿ: ಸಿಎಂ 4 ಲಕ್ಷ ಕೋಟಿ ಬಜೆಟ್ ನ ಎಲ್ಲ ವರ್ಗದವರಿಗೂ ಸಮಾನವಾಗಿ ಹಂಚಿಕೆ ಮಾಡಿದ್ದಾರೆ: ಡಿಕೆಶಿ

ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ಇಂದು ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಪ್ರತಿ ಹೆಣ್ಣು ಮಗಳ ಜೀವನದ ಹಿಂದೆ ತನ್ನದೇ ಆದ ಕಥೆಗಳಿವೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಗುರಿ ಇಲ್ಲದ ಜೀವನ ಮಹಿಳೆಗೆ ಸಾಧುವಲ್ಲ. ಗುರಿ ಮುಂದಿಟ್ಟುಕೊಂಡೆ ಮುಂದೆ ಸಾಗಬೇಕು ಎಂದು ಸಚಿವರು ಕರೆ ನೀಡಿದರು.

ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಹಿಳೆಯರ ಪ್ರತೀಕವಾಗಿ ನಮ್ಮ ಮುಂದಿದ್ದಾರೆ. ಒಂದೆಡೆ ಅಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿದರೂ ಜೀವನದುದ್ದಕ್ಕೂ ಸಮಾಜಕ್ಕಾಗಿ ಕಳೆದರು. ಅವರು ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ. ಹಾಗೆಯೇ ಕಿತ್ತೂರು ರಾಣಿ ಚನ್ನಮ್ಮ ನಮ್ಮ ಸ್ವಾಭಿಮಾನದ ಪ್ರತೀಕವಾಗಿದ್ದಾರೆ ಎಂದು ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವಾರು ಯೋಜನೆಗಳನ್ನು ತಂದಿದೆ. ರಾಜ್ಯದ 37 ಲಕ್ಷ ಮಕ್ಕಳ ಲಾಲನೆ ಪಾಲನೆ ಮಾಡುತ್ತಿದ್ದು, 15 ಲಕ್ಷ ಬಾಣಂತಿಯರ ಆರೈಕೆ ಮಾಡುತ್ತಿದೆ, ದುರ್ಬಲ ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನವನ್ನು ಬಜೆಟ್‌ನಲ್ಲಿ ಹೆಚ್ಚಳ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿಸುವ ಇರಾದೆ ಹೊಂದಲಾಗಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ- ವಿಜಯೇಂದ್ರ
Next: ಬಿ.ಎಂ ಪಬ್ಲಿಕ್ ಶಾಲೆ ಉದ್ಘಾಟಿಸಿದ ಡಿಸಿಎಂ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.