ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಅತಿಯಾಗಿ ಒಲೈಕೆ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿರುವ ಸುಳಿವೊಂದು ಹೊರಬಿದ್ದಿದೆ.
ಹೌದು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮೀಸಲಾತಿಯನ್ನು 4 ರಿಂದ ಇದೀಗ 10ಕ್ಕೆ ಹೆಚ್ಚಿಸುವಂತೆ ಸಚಿವ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಮುಸ್ಲಿಮರ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ಗೆ ಸಂಘಟನೆಗಳು ಮನವಿ ಮಾಡಿದ್ದವು. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್ನಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Toys Park ನಿರ್ಮಿಸಲು ಮನವಿ
ಮುಸ್ಲಿಮರಿಗೆ 2 ಬಿ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಬಗ್ಗೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.
ಇತ್ತೀಚೆಗೆ ಮಂಡಿಸಿದ್ದ 2025-26ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ಘೋಷಣೆಯ ಬೆನ್ನಲ್ಲೇ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿರುವಂತಿದೆ.
