ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ (ಸೋಮವಾರ ಮಾ. 24) ರಂದು ನಡೆಸಿದ ಸಭೆ ನಡೆಸಿದರು.
ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು. ಇದನ್ನೂ ಓದಿ: ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಡಿಸಿಎಂ
ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ 3 ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.
