ಬೆಂಗಳೂರು: ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಬಾಂಬ್ ಬೆದರಿಕೆಯ ಕರೆಗಳು ಹೆಚ್ಚಾಗಿ ಕಂಡುಬರುತ್ತಿದ್ದು ಅದರಂತೆ ಮತ್ತೆ ಇದೀಗ ರಾಮನಗರ ಜಿಲ್ಲೆ ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಹೌದು, ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಕೆಲ ಕಾಲ ರೈಲ್ವೆ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದ್ದು, ಕೆಲವೇ ನಿಮಿಷಗಳಲ್ಲಿ ರೈಲ್ವೆ ನಿಲ್ದಾಣ ಸ್ಫೋಟಗೊಳ್ಳಲಿದೆ ಎಂಬ ಮಾಹಿತಿ ಗುಪ್ತದಳಕ್ಕೆ ಲಭಿಸಿದೆ. ಇದನ್ನೂ ಓದಿ: ಹನಿಟ್ರ್ಯಾಪ್ ಮಾಡಲು ಬಂದ ಯುವತಿ ಬಗ್ಗೆ ರಾಜಣ್ಣ ಹೇಳಿದ್ದೇನು..?
ತಕ್ಷಣ ಇಂದು ಬೆಳಿಗ್ಗೆ ರಾಮನಗರ ಡಿವೈಎಸ್ಪಿ ಹಾಗೂ ರೈಲ್ವೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಬಾಂಬ್ ಪತ್ತೆದಳ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ನಿಲ್ದಾಣ ಪೂರ್ತಿ ಪರಿಶೀಲಿಸಿದಾಗ ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ.
