ಮೈಸೂರು: ರಾಜ್ಯ ರಾಜಕೀಯದಲ್ಲಿ ಹನಿಟ್ಯಾಪ್ ಪ್ರಕರಣ ಬಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.
ಇನ್ನು ಹೆಚ್ಡಿಕೆ ಭೇಟಿ ಕುರಿತಾಗಿ ಇದೀಗ ಜಿ ಟಿ ದೇವೇಗೌಡ ಅವರು ಪ್ರತಿಕ್ರಿಯಿಸಿ, ಸತೀಶ್ ಜಾರಕಿಹೊಳಿಯವರು ಮುಂದಿನ ಮುಖ್ಯಮಂತ್ರಿ ಆಗಲು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಚ್ ಡಿ ಭೇಟಿ ಮಾಡಿದ್ಯಾಕೆ..?
ಈ ಕುರಿತು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ. ಮುಂದೆ ಸಿಎಂ ಆಗುವ ಅವಕಾಶ ಸಿಕ್ಕರೆ ಜೆಡಿಎಸ್ನ 18 ಶಾಸಕರ ಬೆಂಬಲವನ್ನು ಅವರು ಕೇಳಿರಬಹುದು. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದಿದ್ದಾರೆ.
