ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೆಯ ಜನ್ಮ ದಿನಾಚರಣೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಹಳ ಅದ್ದೂರಿಯಿಂದ ಆಚರಿಸಲಾಗುತ್ತಿದ್ದು ಈ ಬಾರಿ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಅವರ ಜೊತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಏಪ್ರಿಲ್ 01 ರಂದು ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ 118ನೆಯ ಜನ್ಮದಿನದ ಅಂಗವಾಗಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರಾಗಿರುವಂತಹ ರಾಜನಾಥ್ ಸಿಂಗ್ ಅವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ 11 ಗಂಟೆಗೆ ರಾಜನಾಥ್ ಸಿಂಗ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ, ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ, ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಡಿಕೆಶಿ
ಇನ್ನು ಸಿಎಂ ಸಿದ್ದರಾಮಯ್ಯ ಅವರ ಮೊಣಕಾಲಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ, ಡಿಸಿಎಂ ಅವರಿಗೆ ಅವಕಾಶ ಸಿಕ್ಕಿದೆ. “ವಾಸ್ತವವಾಗಿ, ಏಪ್ರಿಲ್ 4 ರಂದು ನಿಗದಿಯಾಗಿದ್ದ ಶ್ರೀಗಳ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಬರಲು ಸಿದ್ಧರಾಗಿದ್ದರು. ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಮುರ್ಮು ಅವರ ಭಾಗವಹಿಸುವಿಕೆ ದೃಢೀಕರಿಸದ ಕಾರಣ, ಆಯೋಜಕರು ಕಾರ್ಯಕ್ರಮವನ್ನು ಏಪ್ರಿಲ್ 1 ಕ್ಕೆ ಮುಂದೂಡಿದರು ಎಂದು ಮೂಲಗಳು ತಿಳಿಸಿವೆ.
