Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿದ್ದರಾಮಯ್ಯ ಸಿಎಂ ಆದ ಬಳಿಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರ: ಬಿವೈವಿ
  • Bangalore
  • Politics
  • State

ಸಿದ್ದರಾಮಯ್ಯ ಸಿಎಂ ಆದ ಬಳಿಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರ: ಬಿವೈವಿ

admin April 1, 2025 1 minute read
Spread the love

ಬೆಂಗಳೂರು: ಬಿಜೆಪಿ 2 ಪ್ರಮುಖ ಹೋರಾಟಗಳನ್ನು ಕೈಗೆತ್ತಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆ ದಿನ ಪಕ್ಷದ ಎಲ್ಲ ಹಿರಿಯರು ಚರ್ಚೆ ಮಾಡಿ ಹೋರಾಟದ ನಿರ್ಧಾರ ಮಾಡಿದ್ದೇವೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಕಳೆದ 20 ತಿಂಗಳಿನಲ್ಲಿ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರೆ. ಸರಕಾರದ ನಿರ್ಧಾರದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರಕಾರ ಹಾಲಿನ ದರ, ವಿದ್ಯುತ್ ದರ, ನೀರಿನ ದರ, ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಮೆಟ್ರೊ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬದುಕು ಹೊರೆ ಎನಿಸುವಂತೆ ಮಾಡಿದೆ. ಬೆಲೆ ಏರಿಕೆ ನಿರಂತರವಾಗಿ ಸಾಗುತ್ತಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: “ಪ್ರಧಾನಮಂತ್ರಿ ಟಿ.ಬಿ. ಮುಕ್ತ್‌ ಭಾರತ್‌ ಅಭಿಯಾನ”‌

ಬೆಲೆ ಏರಿಕೆ ಸೇರಿ ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿ ಏ.2ರಂದು ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸುತ್ತಾರೆ. ದೊಡ್ಡ ಮಟ್ಟದಲ್ಲಿ ಈ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಚೆಗೆ ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4 ಮೀಸಲಾತಿ ನೀಡಿದ್ದಾರೆ. ಇದು ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಗಳ ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ; ಹಿಂದೂಗಳಿಗೆ ಅಪಮಾನ ಮಾಡುವ ಕ್ರಮ ಎಂದು ಆಕ್ಷೇಪಿಸಿದರು. ಮತ್ತೊಂದು ಕಡೆ ಪರಿಶಿಷ್ಟ ಜಾತಿ- ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 38 ಸಾವಿರ ಕೋಟಿ ಹಣವನ್ನು ಬೇರೆ ಬೇರೆ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರಕಾರ ಮತ್ತು ಸಿದ್ದರಾಮಯ್ಯನವರು ಆ ಶೋಷಿತ, ಪೀಡಿತ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಖಂಡಿಸಿದರು. ಸಿದ್ದರಾಮಯ್ಯನವರ ಸರಕಾರವು ಜನರು ಸೇವಿಸುವ ಗಾಳಿಯೊಂದನ್ನು ಬಿಟ್ಟು ಮತ್ತೆಲ್ಲದಕ್ಕೂ ತೆರಿಗೆ ಹಾಕುತ್ತಿದೆ ಎಂದು ಪುನರುಚ್ಚರಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: “ಪ್ರಧಾನಮಂತ್ರಿ ಟಿ.ಬಿ. ಮುಕ್ತ್‌ ಭಾರತ್‌ ಅಭಿಯಾನ”‌
Next: ಸರ್ಕಾರ ನೀರು ಕೊಟ್ಟಾಗ ಸರಿಯಾಗಿ ಬಳಕೆ ಮಾಡಿಕೊಳ್ಳಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.