Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರಿದ್ರ-ಜನವಿರೋಧಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ
  • Bangalore
  • Front news
  • Politics
  • State

ದರಿದ್ರ-ಜನವಿರೋಧಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ

admin April 3, 2025 1 minute read
Spread the love

ಬೆಂಗಳೂರು: ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನೋವಿದೆ ಎಂದು ತಿಳಿಸಿದರು.

40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ನುಡಿದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ

ಸಿದ್ದರಾಮಯ್ಯನವರು 2ನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು ವಿಜಯೇಂದ್ರ ಅವರು ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ವರಿಷ್ಠರನ್ನ ಭೇಟಿ ಮಾಡಿದ ಸಿಎಂ

ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಿಶ್ಲೇಷಿಸಿದರು.

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ ಎಂದು ಟೀಕಿಸಿದರು. ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ; ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ ಪಕ್ಷದ ವರಿಷ್ಠರನ್ನ ಭೇಟಿ ಮಾಡಿದ ಸಿಎಂ
Next: ಬಿಜೆಪಿ ಪ್ರಮುಖರು, ನೂರಾರು ಕಾರ್ಯಕರ್ತರ ಸೆರೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.