ದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾಸವನ್ನು ಕೈಗೊಂಡಿದ್ದು, ಇಂದು (ಗುರುವಾರ ಏ.03) ರಂದು ಕೇಂದ್ರ ಜಲ ಶಕ್ತಿ ಸಚಿವರಾಗಿರುವಂತ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇವಳೆ ಮೇಕೆದಾಟು ಸೇರಿದಂತೆ ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಸಂಬಂಧ ಸಮಲೋಚನೆ ನಡೆಸುವುದರ ಜೊತೆಗೆ ಇನ್ನೂ ಹಲವಾರು ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಲೇ ಬಂದಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ವರಿಷ್ಠರನ್ನ ಭೇಟಿ ಮಾಡಿದ ಸಿಎಂ
ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಉಪಸ್ಥಿತರಿದ್ದರು.
