ಬೆಂಗಳೂರು: ಮಂಗಳವಾರ (ಏ. 03) ರಂದು ರಾಜ್ಯದ ರಾಜಧಾನಿ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕರ್ನಾಟಕದ ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಇಂದು ಶುಕ್ರವಾರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
