ಖರ್ಜೂರ ಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಈ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಬೇಕಾಗುವಂತಹ ಹಲವಾರು ಪೋಷಕಾಂಶಗಳು ದೊರೆಯುವುದರ ಜೊತೆಗೆ ಹಲವು ಔಷಧಿಯ ಗುಣವನ್ನು ಖರ್ಜೂರ ಹಣ್ಣು ಹೊಂದಿದೆ.
ಖರ್ಜೂರ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಬೇಕಾಗಿರುವಂತಹ ಹಲವಾರು ಪೋಷಕಾಂಶಗಳ ಜೊತೆಗೆ ಔಷಧಿ ಗುಣಗಳನ್ನು ಒದಗಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ 2 ರಿಂದ 3 ಖರ್ಜೂರ ಸೇವನೆ ಮಾಡುವುದರಿಂದ ನಮಗೆ ಬೇಕಾಗಿರುವಂತಹ ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6, ಕಬ್ಬಿಣ ಮತ್ತು ನೈಸರ್ಗಿಕ ಸಿಹಿಕಾರಕಗಳಲ್ಲಿ ಸಮೃದ್ಧವಾಗಿರುವ ಖರ್ಜೂರವು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಇದನ್ನೂ ಓದಿ: ತುಳಸಿ ಟೀ ಕುಡಿದರೆ ಏನಿಲ್ಲ ಲಾಭ ಇದೆ ಗೊತ್ತಾ?
ಖರ್ಜೂರ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ.
ಸುಸ್ತು, ಆಯಾಸ ಕಡಿಮೆ: ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದರಿಂದ ಸುಸ್ತು, ಆಯಾಸ ಮತ್ತು ದುರ್ಬಲತೆ ಎನ್ನುವುದು ಇರುವುದಿಲ್ಲ. ಏಕೆಂದರೆ ಖರ್ಜೂರಗಳಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೇರಳ ವಾಗಿ ಸಿಗುತ್ತದೆ. ಗ್ಲುಕೋಸ್, ಫ್ರಕ್ಟೂಸ್, ಸುಕ್ರೋಸ್ ಹೀಗೆ ಬೇರೆ ಬೇರೆ ರೂಪಗಳಲ್ಲಿ ಇರುವುದರಿಂದ ಎಲ್ಲವೂ ಸಹ ದೇಹಕ್ಕೆ ಶಕ್ತಿ ಮತ್ತು ಚೈತನ್ಯವನ್ನು ಕೊಡುವಲ್ಲಿ ನೆರವಾಗುತ್ತವೆ.
ಜೀರ್ಣಶಕ್ತಿ: ಖರ್ಜೂರಗಳಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆ ಗಳನ್ನು ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದ ರಿಂದ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ ಮತ್ತು ಬೇರೆ ಬಗೆಯ ಅನಾರೋಗ್ಯಕರ ಆಹಾರಗಳನ್ನು ಸೇವಿಸುವ ಸಾಧ್ಯತೆ ಇಲ್ಲವಾಗುತ್ತದೆ. ಇದರಿಂದ ಆರೋಗ್ಯಕರವಾದ ಜೀರ್ಣಶಕ್ತಿ ನಿಮ್ಮದಾಗುತ್ತದೆ ಮತ್ತು ತೂಕ ನಿರ್ವಹಣೆ ಕೂಡ ಸಾಧ್ಯ ವಾಗುತ್ತದೆ.
ವಿಟಮಿನ್ಸ್: ಖರ್ಜೂರಗಳಲ್ಲಿ ವಿಟಮಿನ್ ಮತ್ತು ಖನಿಜಾಂಶಗಳು, ಅಂದರೆ ಪೊಟ್ಯಾಶಿಯಂ, ಮೆಗ್ನೀಷಿಯಂ, ಕಬ್ಬಿಣ, ವಿಟಮಿನ್ ಬಿ6 ಮತ್ತು ಇನ್ನಿತರ ಸತ್ವಗಳು ಯಥೇಚ್ಛವಾಗಿ ಸಿಗುತ್ತವೆ. ಇವುಗಳು ದೇಹದ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ತಮ್ಮದೇ ಆದ ಪಾತ್ರವನ್ನು ಹೊಂದಿರುತ್ತವೆ.
ಆಂಟಿ ಆಕ್ಸಿಡೆಂಟ್ ಗುಣಲಕ್ಷಣ: ಖರ್ಜೂರಗಳಲ್ಲಿ ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳು ಹೆಚ್ಚಾಗಿ ಸಿಗುತ್ತವೆ. ಇದರಲ್ಲಿ ಸಿಗುವ ಫಿನೋಲಿಕ್ ಆಮ್ಲ ದೈಹಿಕ ಆಕ್ಸಿಡೆ ಟೀವ್ ಒತ್ತಡವನ್ನು ನಿರ್ವಹಣೆ ಮಾಡುವಲ್ಲಿ ಕೆಲಸ ಮಾಡುತ್ತದೆ.
