Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿವೈವಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾ: ಸಿಎಂ
  • Bangalore
  • Front news
  • Politics
  • State

ಬಿವೈವಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾ: ಸಿಎಂ

admin April 7, 2025 1 minute read
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷವು ಜನಾಕ್ರೋಶ ಯಾತ್ರೆಯನ್ನು ಕೈಗೊಂಡಿದ್ದು ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರ ಯಾತ್ರೆಗೆ ಶುಭವಾಗಲೆಂದು ಟಕ್ಕರ್ ಕೊಟ್ಟಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾಧ್ಯಮ ಘೋಷಿ ಬಿಡುಗಡೆ ಮಾಡಿದ ಅವರು, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ.

ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ.

ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ.

ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ ಎಂದಿದ್ದಾರೆ.

 

 

 

 

About the Author

admin

Administrator

Visit Website View All Posts

Spread the love

Post navigation

Previous: ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ
Next: ನಗರಸಭೆಯ ತೆರಿಗೆ ಹಣದಲ್ಲಿ ನಡೆಯುತ್ತಿದೆ ಗೋಲ್ಮಾಲ್..!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.