Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು: ಸಿಎಂ
  • Bangalore
  • Politics
  • State

ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು: ಸಿಎಂ

admin April 18, 2025 1 minute read
Spread the love

ಬೆಂಗಳೂರು: ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು (ಗುರುವಾರ ಏ. 17) ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ಕಾರ್ಯಕ್ರಮದ  ಲಾಂಛನ ಬಿಡುಗಡೆ ಮತ್ತು ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು. ಸಮಾಜದ ಬದಲಾವಣೆಗಾಗಿ ಬದುಕಿರುವವರೆಗೂ ಪ್ರಯತ್ನಿಸಿದರು. ಬಸವಣ್ಣನವರ ಅನುಭವ ಮಂಟಪ ಪರಿಕಲ್ಪನೆಯ ಮೂಲಕ 12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಸ್ಥಾಪನೆಯಾಗಿತು. ಇಲ್ಲಿ ಚರ್ಚೆ ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿದು ಅದನ್ನು ಜಾರಿ ಮಾಡುತ್ತಿದ್ದರು. ಜಗತ್ತಿನ ಮೊದಲನೇ ಸಂಸತ್ತು ಇದಾಗಿತ್ತು. ಎಲ್ಲಾ ಧರ್ಮ, ಜಾತಿಯವರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿತ್ತಲ್ಲದೇ ಅವರ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿತ್ತು ಎಂದರು. ಇದನ್ನೂ ಓದಿ: ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಬಸವ ಕಲ್ಯಾಣದ ಪುನರುತ್ಥಾನ ಮಾಡಲು ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಪುನರುತ್ಥಾನದ ಕೆಲಸವನ್ನು ಈ ಬಾರಿ ಪೂರೈಸಲಾಗುವುದು   ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

 

About the Author

admin

Administrator

Visit Website View All Posts

Spread the love

Post navigation

Previous: ಮಂಗನ ಸಾವಿಗೆ ಮಿಡಿದ ಮನಗಳು
Next: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದಕ್ಕೆ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು?

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.