ಬೆಂಗಳೂರು: 2025ರ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಯನ್ನು ಪಡೆದಿತ್ತು. ಆದರೆ ನಿನ್ನೆ ಶುಕ್ರವಾರ ಏ 18 ರಂದು ತವರಲ್ಲೇ ಹೀನಾಯವಾಗಿ ಸೋಲು ಅನುಭವಿಸಿರುವ ಆರ್ಸಿಬಿಯು ಪಂಜಾಬ್ ತಂಡದ ವಿರುದ್ಧ ಸೋಲು ಅನುಭವಿಸಿದೆ.
ಹೌದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.
ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್ಸಿಬಿ ಒಂದು ಹಂತದಲ್ಲಿ 63 ರನ್ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್ಸಿಬಿ ತಂಡವು ನಿಗದಿತ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು. ಇದನ್ನೂ ಓದಿ: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದಕ್ಕೆ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು?
96 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿತು.
ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ.
