ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಆಮಿಷ ಒಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಾಗಿದ್ದು ಆ ದೂರು ಇದೀಗ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಸ್ಥಾನವನ್ನು ಅಸಿಂಧು ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೆಎಂ ಶಂಕರ್ ಅವರು ಚುನಾವಣಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಸಹ ಆಕ್ಷೇಪಣೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ಈ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಸಿದ್ದರಾಮಯ್ಯ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಶಂಕರ್ ಅವರ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು
