Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿಕೆಶಿ
  • Bangalore
  • Crime
  • Politics
  • State

ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿಕೆಶಿ

admin April 23, 2025 1 minute read
Spread the love

ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ಹಲವಾರು ಜೀವಗಳು ಬಲಿಯಾಗಿದ್ದು ಇಡೀ ದೇಶವೇ ಕಂಬನಿ ಮಿಡಿಯುವಂತಾಗಿದೆ.

ಇನ್ನು ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಬುಧವಾರ ಏಪ್ರಿಲ್ 23ರಂದು ಪ್ರತಿಕ್ರಿಯಿಸಿದ ಅವರು, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಶ್ಮೀರ ದಾಳಿ; 4 ಶಂಕಿತರ ಫೋಟೋ ರಿಲೀಸ್..!

ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.

ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದರು.

ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವ ದಾಳಿಯನ್ನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂದು ಆಘಾತವಾಗಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕಾಶ್ಮೀರ ದಾಳಿ; 4 ಶಂಕಿತರ ಫೋಟೋ ರಿಲೀಸ್..!
Next: ಉಗ್ರರ ದಾಳಿ; ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.