Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಶ್ಮೀರ ದಾಳಿ; ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!?
  • Crime
  • Front news
  • Politics

ಕಾಶ್ಮೀರ ದಾಳಿ; ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!?

admin April 24, 2025 1 minute read
Spread the love

ನವದೆಹಲಿ: ಕಾಶ್ಮೀರದ ಮೇಲೆ ಏಕಾಏಕಿ ಉಗ್ರರು ಭೀಕರ ದಾಳಿ ಮಾಡಿರುವುದರಿಂದ ಪಾಕ್ ಸಂಬಂಧಕ್ಕೆ ಭಾರತ ಎಳ್ಳು ನೀರು ಬಿಟ್ಟಿದೆ.

ಹೌದು, ಕಾಶ್ಮೀರದ ಉಗ್ರ ದಾಳಿಯಿಂದಾಗಿ ದೇಶದ ಹಲವು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಸಭೆ ಕರೆದು ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.

ಕಾಶ್ಮೀರದಲ್ಲಿ ನಡೆದ ಉಗ್ರರ ಭೀಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಬುಧವಾರ ಏ. 23) ರಂದು ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಮೋದಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಹಲವು ತೀರ್ಮಾನಕ್ಕೆ ಬರಲಾಗಿದೆ. ಇದನ್ನೂ ಓದಿ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ

ಹಲವು ಮಹತ್ವದ ನಿರ್ಧಾರಗಳು

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಮುಚ್ಚುವುದ,

ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು

ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು.

ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ
Next: ಮೃತ ಕುಟುಂಬಸ್ಥರಿಗೆ ಸಾಂತ್ವನ  ಹೇಳಿದ ತೇಜಸ್ವಿ ಸೂರ್ಯ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.