ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಕೃತ್ಯಗಳನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದೊಂದಿಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು (ಶುಕ್ರವಾರ ಏ, ೨೫) ರಂದು ಸಂಜೆ 6.45 ಗಂಟೆಗೆ ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿಯನ್ನು ಆಯೋಜಿಸಲಾಯಿತು. ಇದನ್ನೂ ಓದಿ:ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಸಿಎಂ
ಈ ಮೌನ ಶ್ರದ್ಧಾಂಜಲಿಯಲ್ಲಿ ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ರವರು ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೆ ಜೆ ಜಾರ್ಜ್, ಕೃಷ್ಣ ಭೈರೇಗೌಡ, ಜಮೀರ್ ಅಹ್ಮದ್ ಬಿ ಎ ಸುರೇಶ್, ಪಕ್ಷದ ಹಿರಿಯ ನಾಯಕರು, ಸಂಸದರು, ಶಾಸಕರು, 2024ರ ಲೋಕಸಭಾ ಅಭ್ಯರ್ಥಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಬಿಬಿಎಂಪಿ ಸದಸ್ಯರು, ಕೆಪಿಸಿಸಿ ಮುಂಚೂಣಿ ಘಟಕ, ಸೆಲ್, ವಿಭಾಗಗಳ ಅಧ್ಯಕ್ಷರು ಭಾಗವಹಿಸಿದ್ದರು.
